Banner Top
Banner Content

ಪ್ರೇಕ್ಷಕರ ಗಮನಸೆಳೆದ ‘ಅಮರನ್’ ಸ್ಫೂರ್ತಿದಾಯಕ ಕಥೆ

2024ರ ಸೂಪರ್‌ ಹಿಟ್‌ ಸಿನೆಮಾಗಳ ಸಾಲಿನಲ್ಲಿ ಸ್ಥಾನ ಗಿಟ್ಟಿಸಿಕೊಂಡ ‘ಅಮರನ್’

ಬಾಕ್ಸಾಫೀಸ್‌ನಲ್ಲಿ ಶಿವ ಕಾರ್ತಿಕೇಯನ್‌ – ಸಾಯಿ ಪಲ್ಲವಿ ಸಿನೆಮಾದ ಕಮಾಲ್‌

ಇದೇ ಅಕ್ಟೋಬರ್ 31ರಂದು ಬಿಡುಗಡೆಯಾದ ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನೆಮಾ ಎಲ್ಲಾ ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ‘ಅಮರನ್’ ಸಿನೆಮಾ ನೋಡಿದ ಪ್ರೇಕ್ಷಕರು ಮತ್ತು ವಿಮರ್ಶಕರು ಸಿನೆಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದು, ‘ಅಮರನ್’ ಬಾಕ್ಸಾಫೀಸ್ ನಲ್ಲೂ ಗಳಿಕೆಯ ವಿಷಯದಲ್ಲಿ ಸಖತ್ ಸದ್ದು ಮಾಡುತ್ತಿದೆ.  ‘ಅಮರನ್’ ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಯೋಪಿಕ್ ಸಿನೆಮಾವಾಗಿದ್ದು, 2024ರ ತಮಿಳು ಚಿತ್ರರಂಗದ ಅತಿದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ‘ಅಮರನ್’ ಕೂಡ ಒಂದಾಗಿ ಸ್ಥಾನಪಡೆದುಕೊಂಡಿದೆ.

‘ಸೋನಿ ಪಿಕ್ಚರ್ಸ್’ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ‘ರಾಜಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌ʼ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಾಯಿ ಪಲ್ಲವಿ ನಾಯಕಿಯ ಪಾತ್ರದಲ್ಲಿ ಮನಮುಟ್ಟುವಂತೆ ಅದ್ಭುತವಾಗಿ ನಟಿಸಿದ್ದಾರೆ. ‘ಅಮರನ್’ ಚಿತ್ರಕ್ಕೆ ಜಿ. ವಿ ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸಿದ್ದಾರೆ.

ನೈಜ ಘಟನೆಗೆ ಚಿತ್ರ ರೂಪ

‘ಅಮರನ್’ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ರಾಜ್‌ಕುಮಾರ್ ಪೆರಿಯಸಾಮಿ ‘ಅಮರನ್’ ಸಿನೆಮಾಕ್ಕೆ ಆಕ್ಷನ್-ಕಟ್ ಹೇಳಿದ್ದಾರೆ. ‘ದೀಪಾವಳಿ ಹಬ್ಬ’ದ ದಿನದಂದು ತಮಿಳು, ತೆಲುಗು, ಹಿಂದಿ, ಮಲಯಾಳಂ, ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ‘ಅಮರನ್’ ಎಲ್ಲೆಡೆ ಅಬ್ಬರಿಸುತ್ತಿದ್ದು, ಚಿತ್ರತಂಡದ ಖುಷಿಗೆ ಕಾರಣವಾಗಿದೆ. ಮತ್ತೊಂದೆಡೆ ‘ಅಮರನ್’ ಸಿನೆಮಾಕ್ಕೆ ದಿನದಿಂದ ದಿನಕ್ಕೆ ಪೈರಸಿ ಕಾಟವೂ ಹೆಚ್ಚಾಗುತ್ತಿದ್ದು, ಸಿನೆಮಾದ ಲಿಂಕ್‌ಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವುದು ಚಿತ್ರತಂಡಕ್ಕೆ ಬೇಸರ ತಂದಿದೆ.

Banner Content
Tags: , ,

Related Article

Sponsored Ads1

error: Content is protected !!