Banner Top
Banner Content

ಪೋಷಕರಾಗುತ್ತಿರುವ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ ಹರ್ಷಿಕಾ- ಭುವನ್ ಜೋಡಿ

ಕೊಡವ ಸ್ಟೈಲ್‌ನಲ್ಲಿಯೇ ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ

ಸಂಭ್ರಮದಲ್ಲಿ ಹರ್ಷಿಕಾ ಪೂಣಚ್ಚ ಭುವನ್ ದಂಪತಿ

ಸ್ಯಾಂಡಲ್ ವುಡ್ ಸ್ಟಾರ್ ಜೋಡಿ ಭುವನ್ ಹಾಗೂ ಹರ್ಷಿಕಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ವರ್ಷ ಆಗಸ್ಟ್​ನಲ್ಲಿ (2023, ಆಗಸ್ಟ್  24ರಂದು) ವಿವಾಹವಾಗಿದ್ದ ಈ  ಜೋಡಿ ವರ್ಷ ತುಂಬುವುದರೊಳಗೆ ಸಿಹಿ ಸುದ್ದಿ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೋಷಕರಾಗುತ್ತಿದ್ದು ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.

ಅಕ್ಟೋಬರ್ ನಲ್ಲಿ ಭುವನ್- ಹರ್ಷಿಕಾ ಮನೆಗೆ ಹೊಸ ಅತಿಥಿಯ ಆಗಮನ

ನಟ ಭುವನ್ ಹಾಗೂ ಹರ್ಷಿಕಾ ಇಬ್ಬರು ತಂದೆ ತಾಯಿ ಆಗುತ್ತಿದ್ದಾರೆ. ತಾವು ಪೋಷಕರಾಗುತ್ತಿರೋ ವಿಚಾರ ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ, ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಈ ಫೋಟೋ ಶೂಟ್ ನಲ್ಲಿ ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ ಉಡುಗೆ ತೊಟ್ಟು ಫೋಟೊಶೂಟ್ ನಲ್ಲಿ ಮಿಂಚಿದ್ದಾರೆ. ಅಕ್ಟೋಬರ್​ನಲ್ಲಿ ಭುವನ್ ಹಾಗೂ ಹರ್ಷಿಕಾ ಮನೆಗೆ ಹೊಸ ಅತಿಥಿ ಆಗಮನವಾಗಲಿದೆ.
ಫೋಟೋ ಶೂಟ್ ಮೂಲಕ ಖುಷಿ ಹಂಚಿಕೊಂಡ ಜೋಡಿ
ಇತ್ತೀಚಿನ ದಿನಗಳಲ್ಲಿ ಪ್ರೆಗ್ನೆನ್ಸಿ ಶೂಟ್ ಅಂದ ತಕ್ಷಣ ಎಲ್ಲರೂ ಹೊಸ ಹೊಸ ಕಾನ್ಸೆಪ್ಟ್ ನಲ್ಲಿ ಶೂಟ್ ಮಾಡಲು ಇಷ್ಟ ಪಡ್ತಾರೆ. ಆದ್ರೆ ಹರ್ಷಿಕಾ ಮತ್ತು ಭುವನ್ ಮಾತ್ರ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯವನ್ನ ಬಿಟ್ಟು ಕೊಡಬಾರದು ಅನ್ನೋ ಹಿನ್ನಲೆಯಲ್ಲಿ ಅದ್ರದ್ದೇ ಆದ ಶೈಲಿಯಲ್ಲಿ ಫೋಟೋ ಶೂಟ್ ಮಾಡುವ ಮೂಲಕ ಖುಷಿಯ ವಿಚಾರವನ್ನ ಹಂಚಿಕೊಂಡಿದ್ದಾರೆ. ತಮ್ಮ ಚೊಚ್ಚಲ ಮಗುವಿನ ಆಗಮನದ ವಿಚಾರ ತಿಳಿಸಲು ಪುರಾತನ ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸುವ ಮೂಲಕ ಸಿಹಿ ಸುದ್ದಿಯನ್ನ ರಾಜ್ಯದ ಜನತೆಗೆ ಹಾಗೂ ಅಭಿಮಾನಿಗಳಿಗೆ ತಿಳಿಸಿದೆ ಈ ಜೋಡಿ. ಅದರ ಜೊತೆಯಲ್ಲಿ ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಿದ್ದಾರೆ ಭುವನ್ ಮತ್ತು ಹರ್ಷಿಕಾ.
ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ಮದುವೆಗೆ ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರು ಕೂಡ ಸಾಕ್ಷಿಯಾಗಿದ್ದರು. ಇದೀದ ಮೊದಲ ಮಗುವಿನ ಆಗಮನಕ್ಕಾಗಿ ದಂಪತಿ ಎದುರು ನೋಡುತ್ತಿದ್ದಾರೆ.
Banner Content
Tags: , , ,
Karthik Sudhan is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Karthik Sudhan has worked in reputed online publications of Kannada.

Related Article

Sponsored Ads1

error: Content is protected !!