Banner Top
Banner Content

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಸಿ. ಎಂ. ಸಿದ್ದರಾಮಯ್ಯ ಸಾಥ್

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಮಾಡಿದ ಸಿದ್ಧರಾಮಯ್ಯ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ

ಸಾಮಾಜಿಕ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಸಾಮಾಜಿಕ ಕಳಕಳಿಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಿ.ಎಂ ಮೆಚ್ಚುಗೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಿನೆಮಾ ಎಂಬುದು ಬಹಳ ಪ್ರಭಾವಶಾಲಿ ಮಾಧ್ಯಮ. ಸಿನೆಮಾಗಳ ಮೂಲಕ ವಾಸ್ತವ ವಿಷಯಗಳನ್ನು ಬಹಳ ಬೇಗ ಜನರಿಗೆ ತಲುಪಿಸಬಹುದು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನೆಮಾ ವಾಸ್ತವ ಸ್ಥಿತಿಯನ್ನು ಕಥಾಹಂದರವಾಗಿ ಇಟ್ಟುಕೊಂಡು ತಯಾರಾಗಿರುವುದು ಶ್ಲಾಘನೀಯ. ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನೆಮಾವಾಗಿಸಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ ಪ್ರೇಕ್ಷಕರ ಮುಂದೆ ಹೇಳಲು ಹೊರಟಿದೆ. ಈ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದು ಶುಭ ಹಾರೈಸಿದರು.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟ ಕುಮಾರ್ ಬಂಗಾರಪ್ಪ, ನಟಿ ರಾಗಿಣಿ ದ್ವಿವೇದಿ, ಹಿರಿಯ ನಟ ದೊಡ್ಡಣ್ಣ ಮುಂತಾದ ಅನೇಕ ಕಲಾವಿದರು ಇತರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಜಯಶಂಕರ ಟಾಕೀಸ್‌’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್‌ ಆರ್ಯನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಾತ್ವಿಕ್‌ ಪವನ್‌ ಕುಮಾರ್‌ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.

ತೆರೆಗೆ ಬರಲು ಸಿದ್ಧವಾದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ. ಹೆಚ್. ಮುನಿಯಪ್ಪ, ನಿರ್ಮಾಪಕರಾದ ಭಾ. ಮ. ಹರೀಶ್‌, ಭಾ. ಮ. ಗಿರೀಶ್‌, ಚೆಲುವ ಮೂರ್ತಿ, ‘ಕರ್ನಾಟಕ ರಾಜ್ಯ ಪಡಿತರ ಸಂಘ’ದ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯರಂಗದ ಅನೇಕ ಗಣ್ಯರು ಹಾಜರಿದ್ದರು. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ಚಿತ್ರ ತಂಡ, ಶ್ರೀಘ್ರದಲ್ಲೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನೆಮಾವನ್ನು ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದೆ.

Banner Content
Tags: , , , , , , , , , ,

Related Article

Sponsored Ads1

error: Content is protected !!