Banner Top
Banner Content

ಹೊಸ ಅಧ್ಯಾಯದಲ್ಲಿ ‘ಕ್ರೌನ್ ಆಫ್ ಬ್ಲಡ್ ಬಾಹುಬಲಿ’

ಎಸ್. ಎಸ್. ರಾಜಮೌಳಿ ನಿರ್ದೇಶನದಲ್ಲಿ ‘ಬಾಹುಬಲಿ’ ಪಾರ್ಟ್-1, ‘ಬಾಹುಬಲಿ’ ಪಾರ್ಟ್-2 ಚಿತ್ರ ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಞರುಗಳಿಗೆ ಒಂದರ ಹಿಂದೊಂದು ಅವಕಾಶಗಳು ಸಿಗಲಾರಂಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾ ದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಆಗ ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ.

ಅನಿಮೇಶನ್ ರೂಪದಲ್ಲಿ ತೆರೆಗೆ

ಅದೆಲ್ಲವೂ ಈಗ ‘ಕ್ರೌನ್ ಆಫ್ ಬ್ಲಡ್ ಬಾಹುಬಲಿ’ ಎಂಬ ಹೆಸರಿನಲ್ಲಿ‌ ಅನಿಮೇಶನ್ ರೂಪದಲ್ಲಿ ತೆರೆಗೆ ಬರುತ್ತಿದೆ. ಹೌದು, ಈಗ ‘ಕ್ರೌನ್ ಆಫ್ ಬ್ಲಡ್ ಬಾಹುಬಲಿ’ ಎಂಬ ಹೆಸರಿನಲ್ಲಿ‌ ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್‌ದಲ್ಲಿ ಹೇಳಲು ಯೋಜನೆ ಸಿದ್ದಗೊಂಡಿದೆ.

‘ಎ ಗ್ರಾಫಿಕ್ ಇಂಡಿಯಾ’ ಮತ್ತು ‘ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್’ ಅಡಿಯಲ್ಲಿ ಎಸ್. ಎಸ್. ರಾಜಮೌಳಿ – ಶರದ್‌ ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿರುವ, ‘ಕ್ರೌನ್ ಆಫ್ ಬ್ಲಡ್ ಬಾಹುಬಲಿ’ ಅನಿಮೇಶನ್ ರೂಪಕ್ಕೆ ಜೀವನ್. ಜೆ. ಕಾಂಗ್ – ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿರುತ್ತಾರೆ.

ಅನಿಮೇಟೆಡ್‌ ರೂಪದಲ್ಲಿ ಬರುತ್ತಿರುವ ‘ಕ್ರೌನ್ ಆಫ್ ಬ್ಲಡ್ ಬಾಹುಬಲಿ’ ಹೊಸ ಅಧ್ಯಾಯದಲ್ಲಿ ಸಾಹಸ, ರಾಜಕೀಯ ಅಚ್ಚರಿಗಳು, ನಾಟಕ, ಮೋಸ, ಯುದ್ದ, ಹೀರೋಗಿರಿ, ವಿಶ್ವಾಸ, ಧೈರ್ಯ ಎಲ್ಲ ಅಂಶಗಳು ಸೇರಿಕೊಂಡಿದೆ.

ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಸ್ಟ್ರೀಮಿಂಗ್ ಆಗಲು ರೆಡಿ…

ಕೇವಲ ಮಕ್ಕಳು ಮಾತ್ರವಲ್ಲದೆ ಇನ್ನು ವಿಶಾಲವಾದ ಪ್ರೇಕ್ಷಕ ವರ್ಗಕ್ಕೆ ‘ಕ್ರೌನ್ ಆಫ್ ಬ್ಲಡ್ ಬಾಹುಬಲಿ’ ಭಾರತೀಯ ಅನಿಮೇಶನ್ ಅನ್ನು ಮರು ರೂಪಿಸಿರುವುದು ವಿಶೇಷ. ಇಂತಹ ಪವರ್ ಪ್ಯಾಕ್ಡ್ ಆಕ್ಷನ್ ಸೀರೀಸ್ ಕನ್ನಡ ಸೇರಿದಂತೆ, ಎಲ್ಲಾ ಭಾಷೆಗಳಲ್ಲಿ ಮೇ 17, 2024ರಿಂದ ʼಡಿಸ್ನಿ ಪ್ಲಸ್ ಹಾಟ್ ಸ್ಟಾರ್ʼ ನಲ್ಲಿ ಸ್ಟ್ರೀಮಿಂಗ್ ಆಗಲು ಸಜ್ಜಾಗಿದೆ.

Banner Content
Tags: ,

Related Article

No Related Article

Sponsored Ads1

error: Content is protected !!