Banner Top
Banner Content

ಆಗಸ್ಟ್ 15ಕ್ಕೆ ‘ಡಬಲ್ ಇಸ್ಮಾರ್ಟ್’ ಸಿನಿಮಾ ಧಮಾಕ…

ಆ.15ಕ್ಕೆ ಪೂರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾ ರಿಲೀಸ್

ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್​ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ‘ಡಬಲ್ ಇಸ್ಮಾರ್ಟ್’ ಚಿತ್ರ ತೆರೆಗೆ ಬರಲಿದೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

‘ಡಬಲ್ ಇಸ್ಮಾರ್ಟ್’ ಬಿಡುಗಡೆಗೆ‌ ಮುಹೂರ್ತ ಫಿಕ್ಸ್..

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್​’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ‘ಡಬಲ್ ಇಸ್ಮಾರ್ಟ್’ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ಒಂದು ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

Banner Content
Tags: , , , ,

Related Article

Sponsored Ads1

error: Content is protected !!