Banner Top
Banner Content

ಚಿರಂಜೀವಿ 157 ಸಿನೆಮಾಕ್ಕೆ ಕ್ಲಾಪ್ ಮಾಡಿದ ವಿಕ್ಟರಿ ವೆಂಕಟೇಶ್

‘ಯುಗಾದಿ ಹಬ್ಬ’ಕ್ಕೆ ಸೆಟ್ಟೇರಿದ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ

ಚಿರು 157ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್-ಕಟ್

‘ಯುಗಾದಿ ಹಬ್ಬ’ಕ್ಕೆ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ ಸೆಟ್ಟೇರಿದೆ. ಹೈದರಾಬಾದ್ ನಲ್ಲಿಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಿತ್ರಕ್ಕೆ ವಿಕ್ಟರಿ ವೆಂಕಟೇಶ್ ಕ್ಲ್ಯಾಪ್ ಮಾಡಿದರು. ನಿರ್ಮಾಪಕ ಅಲ್ಲು ಅರವಿಂದ್ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಿರ್ದೇಶಕ ಕೆ. ರಾಘವೇಂದ್ರ ಫಸ್ಟ್ ಶಾಟ್ ಗೆ ಆಕ್ಷನ್-ಕಟ್ ಹೇಳಿದರು. ಖ್ಯಾತ ನಿರ್ಮಾಪಕರಾದ ದಿಲ್ ರಾಜು ಹಾಗೂ ಸಿರೀಶ್ ಸ್ಕ್ರಿಪ್ಟ್ ಹಸ್ತಾಂತರಿಸಿದರು. ಮುಹೂರ್ತ ಸಮಾರಂಭದಲ್ಲಿ ನಿರ್ದೇಶಕರಾದ ಬಾಬಿ, ವಸಿಷ್ಠ, ಶ್ರೀಕಾಂತ್ ಒಡೆಲಾ, ಖ್ಯಾತ ಕಥೆಗಾರ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಕ್ಷನ್ ಕಥೆಗೆ ಎಮೋಷನ್ ಟಚ್..!

ಚಿರು 157ನೇ ಚಿತ್ರಕ್ಕೆ ‘ಸಂಕ್ರಾಂತಿಕಿ ವಸ್ತುನ್ನಾಂ’ ಖ್ಯಾತಿಯ ನಿರ್ದೇಶಕ‌ ಅನಿಲ್ ರವಿಪುಡಿ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ಮೆಗಾ ಸ್ಟಾರ್ ಅವರನ್ನು ಹೊಸ ಅವತಾರದಲ್ಲಿ ಪರಿಚಯಿಸಲು ರೆಡಿಯಾಗಿದ್ದಾರೆ. ಶಂಕರ್ ವರಪ್ರಸಾದ್ ಎಂಬ ಪಾತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರೆ.‌‌ ಅನಿಲ್ ರವಿಪುಡಿ ಮನರಂಜನೆಗೆ ಎಮೋಷನ್ ಟಚ್ ಕೊಟ್ಟು ಕಥೆ ರೂಪಿಸಿದ್ದಾರಂತೆ.

ಶೀಘ್ರದಲ್ಲೇ ಚಿರಂಜೀವಿ 157ನೇ ಸಿನೆಮಾದ ಚಿತ್ರೀಕರಣ ಪ್ರಾರಂಭ…

‘ಶೈನ್ ಸ್ಕ್ರೀನ್‌’ಗಳು ಮತ್ತು ‘ಗೋಲ್ಡ್ ಬಾಕ್ಸ್ ಎಂಟರ್‌ಟೈನ್‌ಮೆಂಟ್ಸ್’ ಬ್ಯಾನರ್ ನಡಿ ಸಾಹು ಗರಪತಿ ಮತ್ತು ಸುಶ್ಮಿತಾ ಕೊನಿಡೇಲ ಚಿತ್ರ ನಿರ್ಮಾಣ ಮಾಡುತ್ತಿದ್ದು, ಅರ್ಚನಾ ಪ್ರೆಸೆಂಟ್ ಮಾಡುತ್ತಿದ್ದಾರೆ. ಭೀಮ್ ಸಿಸಿರೋಲಿಯೋ ಸಂಗೀತ ನಿರ್ದೇಶನ, ತಮ್ಮಿರಾಜು ಸಂಕಲನ, ಸಮೀರ್ ರೆಡ್ಡಿ ಛಾಯಾಗ್ರಹಣ ಚಿತ್ರಕ್ಕೆ ಇರಲಿದೆ. ಶೀಘ್ರದಲ್ಲೇ ಚಿರಂಜೀವಿಯವರ 157 ಸಿನೆಮಾದ ಚಿತ್ರೀಕರಣ ಪ್ರಾರಂಭವಾಗಲಿದೆ.

Banner Content
Tags: , , , , ,

Related Article

Sponsored Ads1

error: Content is protected !!