Banner Top
Banner Content

ವಿಷ್ಣುವರ್ಧನ್ ‘ಅಮೃತ ಮಹೋತ್ಸವ’ದಂದು ಸ್ಮಾರಕಕ್ಕೆ ಅಡಿಗಲ್ಲು

‘ಕಿಚ್ಚ’ನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ

2025ರ ಸೆಪ್ಟೆಂಬರ್ 18ಕ್ಕೆ ವಿಷ್ಣುವರ್ಧನ್ ಸ್ಮಾರಕಕ್ಕೆ ಅಡಿಗಲ್ಲು

ಬೆಂಗಳೂರು, ಆ. 20; ಕನ್ನಡ ಚಿತ್ರರಂಗದ ಹಿರಿಯ ನಟ ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸಮಾಧಿಯನ್ನು ಇತ್ತೀಚೆಗಷ್ಟೇ ರಾತ್ರೋರಾತ್ರಿ ‘ಅಭಿಮಾನ್ ಸ್ಟುಡಿಯೋ’ದಿಂದ ತೆರವು ಮಾಡಲಾಗಿತ್ತು. ವಿಷ್ಣುವರ್ಧನ್‌ ಸಮಾಧಿ ತೆರವಿಗೆ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಇದೇ 2025ರ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಅವರ ಹೊಸ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ. ಸೆಪ್ಟೆಂಬರ್ 18ರಂದು ‘ಅಮೃತಾ ಮಹೋತ್ಸವ’ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ವಿಷ್ಣುವರ್ಧನ್‌ ಫ್ಯಾನ್ಸ್ ಮುಂದಾಗುತ್ತಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ‘ವಿಷ್ಣುಸೇನಾ ಸಮಿತಿ’ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿದ ಅಭಿಮಾನಿಗಳು ಕಾರ್ಯಕ್ರಮದ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು.

‘ದಾದಾ ಸ್ಮಾರಕ’ದ ಬ್ಲ್ಯೂ ಪ್ರಿಂಟ್ ‘ಕಿಚ್ಚ’ನಿಂದ ಅನಾವರಣ

‘ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಹೇಳಿಕೇಳಿ ಕಿಚ್ಚ ವಿಷ್ಣುದಾದಾರ ಅಪ್ಪಟ ಅಭಿಮಾನಿ. ಸುದೀಪ್ ಅವರ ಹುಟ್ಟುಹಬ್ಬದಂದೇ ಯಜಮಾನರ ಸ್ಮಾರಕದ ಬ್ಲ್ಯೂಪ್ರಿಂಟ್ ನ್ನು ಸ್ವತಃ ಕಿಚ್ಚ ಅನಾವರಣ ಮಾಡಲಿದ್ದಾರೆ. 2025ರ ಸೆಪ್ಟೆಂಬರ್ 18ರಂದು ದಾದಾ ಬರ್ತಡೇ ದಿನವೇ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು. ಕೆಂಗೇರಿ ಬಳಿ ನಿರ್ಮಾಣ ಆಗುವ ಸ್ಮಾರಕ, ‘ಅಭಿಮಾನ್ ಸ್ಟುಡಿಯೋ’ ಪುಣ್ಯಭೂಮಿಗೆ ಸಮ ಅಲ್ಲ’ ಎನ್ನುವುದನ್ನು ವೀರಕಪುತ್ರ ಶ್ರೀನಿವಾಸ್‌ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ವೀರಕಪುತ್ರ ಶ್ರೀನಿವಾಸ್, ‘ಅಮೃತವರ್ಷ ಆಚರಿಸಲು ಮೂರು ವರ್ಷದಿಂದ ಪ್ಲಾನ್ ಮಾಡಿಕೊಳ್ಳುತ್ತಿದ್ದೇವೆ. ಅದೇ ದಿನದಂದು ಸ್ಮಾರಕ ಕೆಲಸ ನಿರ್ಮಾಣ ಕೆಲಸ ಆರಂಭಿಸುತ್ತಿದ್ದೇವೆ. ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಸರ್ ಬರ್ತಡೇ ದಿನದಂದು ಸ್ಮಾರಕ ಹೇಗಿರಲಿದೆ ಎಂಬ ಮಾಡೆಲ್ ಪರಿಚಯಿಸುತ್ತೇವೆ. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು ಹಾಕುತ್ತೇವೆ. ಇದು ಪುಣ್ಯಭೂಮಿಗೆ ಸಮ ಎಂದು ವಾದ ಮಾಡಲು ಹೋಗುವುದಿಲ್ಲ. ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪ್ಯಾರೆಲ್ ಎಂದು ಹೇಳುವುದಿಲ್ಲ. ಇದು ಅಸಂಖ್ಯಾತ ಭಾವನೆ ಬೆಸೆದ ಜಾಗ ಇದು. ಪುಣ್ಯಭೂಮಿ ಉಳಿಸಿಕೊಳ್ಳುತ್ತೇವೆ. ಅದಕ್ಕಾಗಿ ಹೋರಾಟ ಮಾಡುತ್ತೇವೆ. ಕುಟುಂಬದವರು ನಿನ್ನೆ ಹೇಳಿದ್ದಾರೆ. ನೀವೆಲ್ಲರೂ ನಿರ್ಧಾರ ಮಾಡಿಕೊಂಡು ಬನ್ನಿ ಎಂದಿದ್ದಾರೆ. ಅದಕ್ಕಾಗಿ ರೂಪುರೇಷೆ ಸಿದ್ದ ಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ದಾದಾ ಅವರ ದರ್ಶನ ಕೇಂದ್ರ ಮಾಡುತ್ತೇವೆ. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ ಎಂಬುದನ್ನು ಸೆಪ್ಟೆಂಬರ್ 2ಕ್ಕೆ ಮಾಹಿತಿ ನೀಡುತ್ತೇನೆ’ ಎಂದರು.

‘ನಂದಿ ಲಿಂಕ್ಸ್ ಗ್ರೌಂಡ್’ನಲ್ಲಿ ಯಜಮಾನರ ಮಹೋತ್ಸವ

‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ‘ಯಜಮಾನರ ಅಮೃತ ಮಹೋತ್ಸವ’ನ್ನ ಒಂದು ದಿನ ಮಾಡೋಕೆ ಪ್ಲಾನ್ ಮಾಡಲಾಗಿದೆ. ಬೆಂಗಳೂರಿನ ‘ನಂದಿ ಲಿಂಕ್ಸ್ ಗ್ರೌಂಡ್’ನಲ್ಲಿ ಈ ಸಂಭ್ರಮ ಮಾಡಲಾಗುತ್ತಿದೆ. ಈ ಒಂದು ‘ಅಮೃತ ಮಹೋತ್ಸವ’ದಲ್ಲಿ ಇಡೀ ಇಂಡಸ್ಟ್ರಿ ಭಾಗಿ ಆಗಲಿದೆ ಅಂತಲೂ ಹೇಳಬಹುದು ಎಂದು ವಿಷ್ಣುವರ್ಧನ್‌ ಅಭಿಮಾನಿಗಳು ತಿಳಿಸಿದ್ದಾರೆ.

Banner Content
Tags: , , , ,

Related Article

Sponsored Ads1

error: Content is protected !!