ಹೊರಬಂತು ‘ಡಿಯರ್ ಹಸ್ಬೆಂಡ್’ ಟೈಟಲ್ ಟೀಸರ್
‘ಡಿಯರ್ ಹಸ್ಬೆಂಡ್’ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್
ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್!
ಸೂರಜ್-ಶರಣ್ಯಾ-ಪ್ರವೀಣ್ ಹೊಸ ರೊಮ್ಯಾಂಟಿಕ್ ಕ್ರೈಂ-ಥ್ರಿಲ್ಲರ್ ಕಹಾನಿ
ಕೆಲ ದಿನಗಳ ಹಿಂದಷ್ಟೇ ‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಸಂಸ್ಥೆಯ ಸಹಯೋಗದಲ್ಲಿ ಹೊಸಚಿತ್ರವೊಂದು ನಿರ್ಮಾಣವಾಗುತ್ತಿರುವ ಸುದ್ದಿ ಹೊರಬಿದ್ದಿತ್ತು. ನಿರ್ಮಾಪಕ ಡಾ. ನಿರಂತರ ಗಣೇಶ್ ಮತ್ತು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಈ ಹೊಸಚಿತ್ರದ ಶೀರ್ಷಿಕೆ ಇದೀಗ ಅನಾವರಣವಾಗಿದೆ.
ನಟರಾದ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಹಾಗೂ ಪ್ರವೀಣ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಹೊಸಚಿತ್ರಕ್ಕೆ ‘ಡಿಯರ್ ಹಸ್ಬೆಂಡ್’ ಎಂದು ಹೆಸರಿಡಲಾಗಿದ್ದು, ಸಸ್ಪೆನ್ಸ್ ಕಂ ಥ್ರಿಲ್ಲರ್ ಶೈಲಿಯಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ‘ಡಿಯರ್ ಹಸ್ಬೆಂಡ್’ ಚಿತ್ರದ ಶೀರ್ಷಿಕೆ ಮತ್ತು ಟೈಟಲ್ ಟೀಸರ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು.
‘ಡಿಯರ್ ಹಸ್ಬೆಂಡ್’ ಟೈಟಲ್ ಟೀಸರ್ ಸಮಾರಂಭದಲ್ಲಿ ಗಣ್ಯರ ದಂಡು…
ಇನ್ನು ‘ಡಿಯರ್ ಹಸ್ಬೆಂಡ್’ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ಟೈಟಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರರಂಗ, ಕ್ರಿಕೆಟ್, ಉದ್ಯಮ ಮತ್ತು ರಾಜಕೀಯ ರಂಗದ ಅನೇಕ ಗಣ್ಯರ ದಂಡೇ ಹಾಜರಾಗಿತ್ತು. ನಟರಾದ ಕಿಚ್ಚ ಸುದೀಪ್, ‘ಡಿಯರ್ ಹಸ್ಬೆಂಡ್’ ಚಿತ್ರದ ಶೀರ್ಷಿಕೆ ಮತ್ತು ಟೈಟಲ್ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.
ನಟರಾದ ಕುಮಾರ್ ಬಂಗಾರಪ್ಪ, ಪ್ರವೀಣ್ ತೇಜ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ಕನ್ನಡ ಚಿತ್ರರಂಗದ ನಿರ್ದೇಶಕರಾದ ಶಶಾಂಕ್, ಎ. ಪಿ. ಅರ್ಜುನ್, ಕ್ರಿಕೆಟಿಗರಾದ ವೈಶಾಕ್ ವಿಜಯಕುಮಾರ್, ರಿತೇಶ್ ಸೇರಿದಂತೆ ಅನೇಕ ಗಣ್ಯರು ಹಾಗೂ ‘ಡಿಯರ್ ಹಸ್ಬೆಂಡ್’ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.
‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್ ವೀಡಿಯೋವನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಬಹುದು…
ಹೇಗಿದೆ ‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್..?
‘ಡಿಯರ್ ಹಸ್ಬೆಂಡ್’ ಚಿತ್ರತಂಡ ಆರಂಭದಲ್ಲಿಯೇ ಹೇಳಿರುವಂತೆ, ಇದೊಂದು ರೊಮ್ಯಾಂಟಿಕ್ ಕ್ರೈಂ-ಥ್ರಿಲ್ಲರ್ ಕಥಾಹಂದರದ ಸಿನೆಮಾ. ಸಿನೆಮಾದ ಟೈಟಲ್ ಟೀಸರ್‌ನಲ್ಲಿ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಸಿನೆಮಾದ ಕಥಾಹಂದರದ ಝಲಕ್ ಅನ್ನು ತೆರೆಮೇಲೆ ತೋರಿಸಿದ್ದಾರೆ. ಸದ್ಯ ‘ಡಿಯರ್ ಹಸ್ಬೆಂಡ್’ ಚಿತ್ರದ ಬಹುತೇಕ ಪ್ರೀ-ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು,
ಇದೇ ತಿಂಗಳಾಂತ್ಯದಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಗೋವಾ ಮತ್ತಿತರ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ.
‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್ ಗೆ ಸಚಿನ್ ಬಸ್ರೂರು ಹಿನ್ನೆಲೆ ಸಂಗೀತವಿದ್ದು, ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರಮೋದ ಮರವಂತೆ ಸಾಹಿತ್ಯ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಹರ್ಷ ಕುಮಾರ್ ಗೌಡ ಛಾಯಾಗ್ರಹಣ, ಬಿ. ಎಸ್. ಕೆಂಪರಾಜ್ ಚಿತ್ರಕ್ಕೆ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಟೈಟಲ್ ಟೀಸರ್ ಬಿಡುಗಡೆ ಮೂಲಕ ಭರದಿಂದ ಚಿತ್ರದ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ವರ್ಷಾಂತ್ಯಕ್ಕೆ ‘ಡಿಯರ್ ಹಸ್ಬೆಂಡ್’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆ ಹಾಕಿಕೊಂಡಿದೆ.















