‘ನಾನು ಕರುಣಾಕರ’ ಚಿತ್ರದ ಟ್ರೇಲರ್ ರಿಲೀಸ್
ಹೊರಬಂತು ‘ನಾನು ಕರುಣಾಕರ’ ಚಿತ್ರದ ಟ್ರೇಲರ್
ಮಧ್ಯಮ ಕುಟುಂಬದ ತಂದೆ-ಮಗನ ಬಾಂಧವ್ಯದ ಕಥೆ
ನಟ ಕಂ ನಿರ್ದೇಶಕ ಆರ್ಯನ್ ತೇಜಸ್ ಹೊಸಚಿತ್ರ
ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಯುವ ನಿರ್ದೇಶಕ ಆರ್ಯನ್ ತೇಜಸ್ ನಾನೆ ಮತ್ತು ನಿರ್ದೇಶನದ ಹೊಸಚಿತ್ರ ‘ನಾನು ಕರುಣಾಕರ’ ತೆರೆಗೆ ಬರಲು ತಯಾರಾಗಿದೆ. ಸದ್ಯ ‘ನಾನು ಕರುಣಾಕರ’ ಚಿತ್ರದ ಪ್ರಚಾರ ಕಾರ್ಯಗಳನ್ನು ಆರಂಭಿಸಿರುವ ಚಿತ್ರತಂಡ, ಇದೀಗ ‘ನಾನು ಕರುಣಾಕರ’ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ.
ಹೇಗಿದೆ ‘ನಾನು ಕರುಣಾಕರ’ ಚಿತ್ರದ ಟ್ರೇಲರ್?
ಈ ಹಿಂದೆ ಶಿಕ್ಷಣ ವ್ಯವಸ್ಥೆಯ ಸುತ್ತ ನಡೆಯುವ ಕಥೆ ಹೊಂದಿದ ‘ಪಾರ್ಕ್ ರೋಡ್ 100 ರೂಪಾಯಿ’ ಚಿತ್ರ ನಿರ್ದೇಶಿಸಿದ್ದ ಆರ್ಯನ್ ತೇಜಸ್, ಕೊರೊನಾಗೂ ಮೊದಲೇ ಈ ಕಥೆಯನ್ನು ರೆಡಿ ಮಾಡಿಕೊಂಡಿದ್ದರಂತೆ. ನಂತರ ಅದನ್ನು ಸ್ನೇಹಿತ ನಮನ್ ನಾರಾಯಣ್ ಅವರಿಗೆ ಹೇಳಿದಾಗ ಅವರಿಗದು ಇಷ್ಟವಾಗಿ ಸ್ನೇಹಿತರಾದ ವೈಭವ್ ಸುರೇಶ್, ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸಂತೋಷ್ ಮತ್ತು ಶ್ರೀಕಾಂತ್ ಇವರ ಜತೆ ‘ನಾನು ಕರುಣಾಕರ’ ಚಿತ್ರದ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ‘ನಾನು ಕರುಣಾಕರ’ ಪ್ರತಿಯೊಬ್ಬರ ಜೀವನಕ್ಕೂ ಕನೆಕ್ಟ್ ಆಗುವಂಥ ಚಿತ್ರ. ಅಪ್ಪ ಮಗನ ಬಾಂಧವ್ಯ ಹಾಗೂ ಗಂಡ ಹೆಂಡತಿಯ ಸಂಬಂಧದ ಸುತ್ತ ನಡೆಯೋ ಕಥೆ ಇದಾಗಿದೆ.
‘ನಾನು ಕರುಣಾಕರ’ ಚಿತ್ರದ ಟ್ರೇಲರ್ ವಿಡಿಯೋವನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಬಹುದು…
ಅಂದಹಾಗೆ, ‘ನಾನು ಕರುಣಾಕರ’ ಚಿತ್ರ ಈಗಾಗಲೇ ತನ್ನೆಲ್ಲ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದ್ದು, ಚಿತ್ರ ಇದೇ ಏಪ್ರಿಲ್ 3ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಪಾಪ್ ಕಾರ್ನ್ ಸಿನಿಮಾ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗಿರುವ ‘ನಾನು ಕರುಣಾಕರ’ ಚಿತ್ರದಲ್ಲಿ ನಾಯಕನಾಗಿ ಆರ್ಯನ್ ತೇಜಸ್ ಹಾಗೂ ಅವರ ಪತ್ನಿಯಾಗಿ ರಾಧಾ ಭಗವತಿ ಹಾಗೂ ಮಗನ ಪಾತ್ರದಲ್ಲಿ ಮಾ. ಭವೀಶ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕರಿಸುಬ್ಬು, ಎಂ. ಕೆ. ಮಠ, ಬಿ. ಎಂ. ವೆಂಕಟೇಶ, ಲೋಕೇಶ್, ಅಪೂರ್ವ ಸೇರಿದಂತೆ ಹಲವರು ನಟಿಸಿದ್ದಾರೆ.















