Video

ಶಿವಣ್ಣ ನಟನೆಯ ತೆಲುಗು ಚಿತ್ರ ‘ಕೂರ್ಮಾವತಾರ’ದ ಟೀಸರ್ ರಿಲೀಸ್‌

‘ಕೂರ್ಮಾವತಾರ’ ಚಿತ್ರದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆ

ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ‘ಕೂರ್ಮಾವತಾರ’ ಟೀಸರ್ ಬಿಡುಗಡೆ

ತೆಲುಗು ಚಿತ್ರದ ವಿಶೇಷ ಪಾತ್ರದಲ್ಲಿ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ನಟನೆ

‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ‘ಪಂಚವಕ್ತ್ರ ಪಿಕ್ಚರ್ಸ್’ ಹಾಗೂ ‘ರುಕ್ವಿನಾ ಸ್ಟುಡಿಯೋಸ್’ ಬ್ಯಾನರ್‌ಗಳಡಿ ಪೂಜಿತಾ ಕೆ. ಮತ್ತು ಕೆ. ಸೇವಿತಾ ಈ ಚಿತ್ರವನ್ನು ನಿರ್ಮಿಸಿದ್ದಾರೆ. ‘ಕೂರ್ಮಾವತಾರ’ ಚಿತ್ರಕ್ಕೆ ಯುವ ನಿರ್ದೇಶಕ ಹರ್ಷವರ್ಧನ್ ಕಡಿಯಾಲ ಆ್ಯಕ್ಷನ್-ಕಟ್ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ಖ್ಯಾತ ತೆಲುಗು ನಿರ್ಮಾಪಕ ದಿಲ್ ರಾಜು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಬಹುತಾರಾಗಣದಲ್ಲಿ ಮೂಡಿಬಂದ ‘ಕೂರ್ಮಾವತಾರ’ ಚಿತ್ರ

‘ಕೂರ್ಮಾವತಾರ’ ಚಿತ್ರದಲ್ಲಿ ಶಿವರಾಜ್‌ಕುಮಾರ್ ಮತ್ತು ಸಾಯಿಕುಮಾರ್ ಅವರ ಜೊತೆಗೆ ವರಲಕ್ಷ್ಮಿ ಶರತ್‌ಕುಮಾರ್, ರಾಜ್ ತರುಣ್, ಶಿವಾಜಿ, ಆತಿರಾ ರಾಜ್, ರಾಜಾ ರವೀಂದ್ರ, ಬಾಲನಟಿ ಲೌಕ್ಯ ಸಾಯಿ, ಸಪ್ತಗಿರಿ, ತಾಗುಬೋತು ರಮೇಶ್, ಶತ್ರು, ವಿಟಿವಿ ಗಣೇಶ್, ಗೆಟಪ್ ಶ್ರೀನು ಹಾಗೂ ಮಹೇಶ್ ವಿಟ್ಟಾ ಸೇರಿದಂತೆ ಬಹುದೊಡ್ಡ ತಾರಾಗಣವಿದೆ.

ಶಿವರಾಜಕುಮಾರ್‌ ಅಭಿನಯದ ‘ಕೂರ್ಮಾವತಾರ’ ಚಿತ್ರದ ತೆಲುಗು ಟೀಸರ್ ವಿಡಿಯೋವನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್‌ ಅನ್ನು ಕ್ಲಿಕ್‌ ಮಾಡಬಹುದು… 

ಚಿತ್ರಕ್ಕೆ ಜಗದೀಶ್ ಚೀಕಟಿ ಛಾಯಾಗ್ರಹಣವಿದ್ದು, ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ, ರಾಘವೇಂದ್ರ ನಾಗರದೋಣ ಕಲಾ ನಿರ್ದೇಶನ ಹಾಗೂ ಲೇಖಕ್ ರಾಮ್ ಅವರ ಚಿತ್ರಕಥೆ-ಸಂಭಾಷಣೆ ಚಿತ್ರಕ್ಕಿದೆ. ಪಿ. ಸ್ನಿಗ್ಧಾ ರೆಡ್ಡಿ ಸಹ-ನಿರ್ಮಾಣ ಹಾಗೂ ಅನಿಲ್ ಕುಮಾರ್ ಮೈಲಾಪುರ್ ಅವರ ಕಾರ್ಯಕಾರಿ ನಿರ್ಮಾಣದಲ್ಲಿ ಸಿನೆಮಾ ಸಿದ್ಧಗೊಳ್ಳುತ್ತಿದೆ. ಅತೀ ಶೀಘ್ರದಲ್ಲೇ ‘ಕೂರ್ಮಾವತಾರ’ ಚಿತ್ರ ರಿಲೀಸ್‌ ಆಗಲಿದೆ.

G S Karthik Sudhan

Karthik Sudhan is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Karthik Sudhan has worked in reputed online publications of Kannada.

Related Posts

error: Content is protected !!