’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಲಾಂಛನ ಬಿಡುಗಡೆ

‘ಬೆಂಗಳೂರು ಚಿತ್ರೋತ್ಸವ’ದ ಲಾಂಛನ ಬಿಡುಗಡೆ ಮಾಡಿದ ಸಿ. ಎಂ
ಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ ನಡೆದ ಸರಳ ಸಮಾರಂಭ
ಬೆಂಗಳೂರು: 07 ಫೆ. 2025, ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ತಯಾರಿ ಭರದಿಂದ ನಡೆಯುತ್ತಿದೆ. ಇದೇ ಮಾರ್ಚ್ 1 ರಿಂದ 8 ವರೆಗೆ ನಡೆಯಲಿರುವ ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಈಗಾಗಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಲನಚಿತ್ರಗಳನ್ನು ಆಹ್ವಾನಿಸಲಾಗಿದ್ದು, ಅವುಗಳ ಆಯ್ಕೆ ಪ್ರಕ್ರಿಯೆ ಕೂಡ ನಡೆಯುತ್ತಿದೆ.
ಇದೇ ವೇಳೆ ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕಾವೇರಿ’ಯಲ್ಲಿ ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ‘ಕರ್ನಾಟಕ ಚಲನಚಿತ್ರ ಅಕಾಡೆಮಿ’ ಅಧ್ಯಕ್ಷ ಸಾಧುಕೋಕಿಲ, ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.