Video

ಹೊರಬಂತು ‘ಕೊತ್ತಲವಾಡಿ’ ಟೈಟಲ್‌ ಟ್ರ್ಯಾಕ್…

‘ಕೊತ್ತಲವಾಡಿ’ ಟೈಟಲ್‌ ಟ್ರ್ಯಾಕ್ ನಲ್ಲಿ ನಾಯಕನ ಗುಣಗಾನ

ಯಶ್ ತಾಯಿ ಪುಷ್ಪಾ ಅರುಣಕುಮಾರ್‌ ನಿರ್ಮಾಣದ ಚೊಚ್ಚಲ ಚಿತ್ರ

ಆಗಸ್ಟ್‌ 1ರಂದು ‘ಕೊತ್ತಲವಾಡಿ’ ತೆರೆಗೆ ಭರದಿಂದ ಸಾಗಿದ ಪ್ರಚಾರ

ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿರುವ ‘ಕೊತ್ತಲವಾಡಿ’ ಚಿತ್ರದ ಟೀಸರ್‌ ಪ್ರೇಕ್ಷಕ ವಲಯದಿಂದ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿದೆ. ಇದೀಗ ಚಿತ್ರತಂಡ ‘ಕೊತ್ತಲವಾಡಿ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಅನಾವರಣ ಮಾಡಿದೆ. ಕಿನ್ನಾಲ್‌ ರಾಜ್‌ ಸಾಹಿತ್ಯ ಬರೆದಿರುವ ಗೀತೆಗೆ ವ್ಯಾಸರಾಜ್‌ ಸೋಸಲೆ ಕಂಠ ಕುಣಿಸಿದ್ದಾರೆ. ವಿಕಾಸ್‌ ವಸಿಷ್ಠ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಲ್ಲಿ ನಾಯಕನ ಶೌರ್ಯವನ್ನು ವರ್ಣಿಸುವಂತಹ ಗುಣಗಾನ ಮಾಡಲಾಗಿದೆ. ಈ ಹಾಡು ಸಖತ್‌ ಪವರ್‌ ಫುಲ್‌ ಆಗಿ ಮೂಡಿ ಬಂದಿದ್ದು, ಮಾಸ್‌ ಆಡಿಯನ್ಸ್‌ ಗಮನ ಸೆಳೆರಯುವಂತಿದೆ.

ನಟ ಯಶ್‌ ಅವರ ತಾಯಿ ಪುಷ್ಪಾ ಅರುಣಕುಮಾರ್‌ ಮೊದಲ ಬಾರಿಗೆ ಬಂಡವಾಳ ಹೂಡಿ ತಮ್ಮದೇ ‘ಪಿ. ಎ.  ಪ್ರೊಡಕ್ಷನ್‌’ ಬ್ಯಾನರಿನಡಿ ‘ಕೊತ್ತಲವಾಡಿ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ಕೊತ್ತಲವಾಡಿ’ ಚಿತ್ರಕ್ಕೆ ಯುವ ಪ್ರತಿಭೆ ಶ್ರೀರಾಜ್ ಆಕ್ಷನ್‌-ಕಟ್‌ ಹೇಳಿದ್ದು, ಪೃಥ್ವಿ ಅಂಬರ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ‘ಕೊತ್ತಲವಾಡಿ’ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಅಂಬರ್‌ ‘ಕೊತ್ತಲವಾಡಿ’ ಚಿತ್ರದಲ್ಲಿ  ಮೊದಲ ಬಾರಿಗೆ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಕೊತ್ತಲವಾಡಿ’ ಚಿತ್ರದ ಟೈಟಲ್‌ ಟ್ರ್ಯಾಕ್‌  ಹಾಡಿನ ವಿಡಿಯೋವನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್‌ ಅನ್ನು ಕ್ಲಿಕ್‌ ಮಾಡಬಹುದು…

ಆಗಸ್ಟ್‌ ಮೊದಲ ವಾರ ‘ಕೊತ್ತಲವಾಡಿ’ ತೆರೆಗೆ

‘ಕೊತ್ತಲವಾಡಿ’ ಸಿನೆಮಾದ ಹಾಡುಗಳಿಗೆ ವಿಕಾಸ್‌ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.

Related Posts

error: Content is protected !!