‘ಮಾರ್ನಮಿ’ ಸಿನಿಮಾದ ಟ್ರೇಲರ್ ರಿಲೀಸ್
ಕಿಚ್ಚ ಸುದೀಪ್ ಹಿನ್ನೆಲೆ ಧ್ವನಿಯಲ್ಲಿ ‘ಮಾರ್ನಮಿ’ ಟ್ರೇಲರ್
ಕರಾವಳಿ ಸೊಗಡಿನ ಸಸ್ಪೆನ್ಸ್-ಥ್ರಿಲ್ಲರ್ ಕಥೆಗೆ ಚಿತ್ರರೂಪ
ರಿತ್ವಿಕ್ ಮಠದ್-ಚೈತ್ರಾ ಆಚಾರ್ ಜೋಡಿಯ ಹೊಸಚಿತ್ರ
ಈಗಾಗಲೇ ತನ್ನ ಟೈಟಲ್ ಮತ್ತು ಕಂಟೆಂಟ್ ಮೂಲಕ ಒಂದಷ್ಟು ಮಂದಿಯ ಗಮನ ಸೆಳೆಯುತ್ತಿರುವ ‘ಮಾರ್ನಮಿ’ ಸಿನೆಮಾದ ಟ್ರೇಲರ್ ಬಿಡುಗಡೆಯಾಗಿದೆ. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ನಟ ಕಿಚ್ಚ ಸುದೀಪ್ ‘ಮಾರ್ನಮಿ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.
ಹೇಗಿದೆ ‘ಮಾರ್ನಮಿ’ ಟ್ರೇಲರ್..?
ಆರಂಭದಲ್ಲಿಯೇ ಚಿತ್ರತಂಡ ಹೇಳಿಕೊಂಡು ಬಂದಿರುವಂತೆ, ಕರ್ನಾಟಕದ ಕರಾವಳಿ ತೀರದ ಕಥೆಯನ್ನು ‘ಮಾರ್ನಮಿ’ ಚಿತ್ರದ ಮೂಲಕ ತೆರೆಗೆ ತರಲಾಗುತ್ತಿದೆ. ಕರಾವಳಿ ಭಾಗದಲ್ಲಿ ನಡೆಯುವ ದಸರಾ ಹಿನ್ನಲೆಯ ಕಥೆಯಲ್ಲಿ ಒಂದು ವಿಭಿನ್ನ ಲವ್ ಸ್ಟೋರಿಯನ್ನು ‘ಮಾರ್ನಮಿ’ ಟ್ರೇಲರಿನಲ್ಲಿ ತೆರೆದಿಡಲಾಗಿದೆ. ಆಕ್ಷನ್, ಎಮೋಷನ್, ಹುಲಿ ಕುಣಿತವನ್ನು ಬ್ಲೆಂಡ್ ಮಾಡಿ ‘ಮಾರ್ನಮಿ’ ಟ್ರೇಲರಿನಲ್ಲಿ ಆಕರ್ಷಕವಾಗಿ ಕಟ್ ಮಾಡಲಾಗಿದೆ. ‘ಮಾರ್ನಮಿ’ ಟ್ರೇಲರಿಗೆ ನಟ ಕಿಚ್ಚ ಸುದೀಪ್ ಹಿನ್ನೆಲೆ ಧ್ವನಿ ನೀಡಿದ್ದು, ಟ್ರೇಲರ್ ಮಾಸ್ ಕಂಟೆಂಟ್ ಮೂಲಕ ಸಿನಿಪ್ರಿಯರ ಗಮನ ಸೆಳೆಯುವಂತೆ ಮೂಡಿಬಂದಿದೆ.
‘ಮಾರ್ನಮಿ’ ಸಿನೆಮಾದ ಟ್ರೇಲರ್ ವಿಡಿಯೋವನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಬಹುದು…
‘ಮಾರ್ನಮಿ’ಯಲ್ಲಿ ಬಹುಕಲಾವಿದರ ತಾರಾಗಣ
‘ಮಾರ್ನಮಿ’ ಚಿತ್ರದಲ್ಲಿ ರಿತ್ವಿಕ್ ಮಠದ್ ನಾಯಕನಾಗಿ, ಚೈತ್ರಾ ಜೆ. ಆಚಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ , ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರಾ ಶೆಟ್ಟಿ ಸೇರಿದಂತೆ ಮುಂತಾದವರು ‘ಮಾರ್ನಮಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಕನ್ನಡ ಕೆಲ ಚಿತ್ರಗಳಲ್ಲಿ ಸಹ ನಿರ್ದೇಶಕ, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ರಿಶಿತ್ ಶೆಟ್ಟಿ ‘ಮಾರ್ನಮಿ’ ಚಿತ್ರಕ್ಕೆ ಆಕ್ಷನ್-ಕಟ್ ಹೇಳುವ ಮೂಲಕ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.
ಇದೇ ನ. 28ಕ್ಕೆ ‘ಮಾರ್ನಮಿ’ ಬಿಡುಗಡೆ
‘ಮಾರ್ನಮಿ’ ಚಿತ್ರಕ್ಕೆ ಶಿವಸೇನ ಛಾಯಾಗ್ರಹಣ, ಪ್ರತೀಕ್ ಶೆಟ್ಟಿ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ. ಸುಧಿ ಆರ್ಯನ್ ಕಥೆ ಬರೆದಿರುವ ‘ಮಾರ್ನಮಿ’ ಸಿನೆಮಾವನ್ನು ‘ಗುನಾಧ್ಯ’ ಬ್ಯಾನರ್ ಅಡಿಯಲ್ಲಿ ಶಿಲ್ಪಾ ನಿಶಾಂತ್ ಹಾಗೂ ನಿಶಾಂತ್ ಎನ್. ಎನ್ ನಿರ್ಮಾಣ ಮಾಡಿದ್ದಾರೆ. ಸದ್ಯ ಜೋರಾಗಿ ‘ಮಾರ್ನಮಿ’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೇ 2025ರ ನವೆಂಬರ್ ತಿಂಗಳ 28ಕ್ಕೆ ‘ಮಾರ್ನಮಿ’ ಚಿತ್ರವನ್ನು ತೆರೆಗೆ ತರುತ್ತಿದೆ.















