Pop Corner

ಪುರಿ-ಸೇತುಪತಿ ಹೊಸ ಸಿನೆಮಾ ಶೂಟಿಂಗ್ ಕಂಪ್ಲೀಟ್‌!

ಪುರಿ ಜಗನ್ನಾಥ್ – ವಿಜಯ್ ಸೇತುಪತಿ ಹೊಸಚಿತ್ರದ ಚಿತ್ರೀಕರಣ ಸಂಪೂರ್ಣ

ವಿಜಯ್‌ ಸೇತುಪತಿ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ಸಿನೆಮಾದ ಶೂಟಿಂಗ್ ಮುಕ್ತಾಯ

ಸದ್ದಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿದ ಚಿತ್ರತಂಡ

ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ನಟ ವಿಜಯ್ ಸೇತುಪತಿ ಕಾಂಬಿನೇಶನ್‌ ನಲ್ಲಿ ಮೂಡಿಬರುತ್ತಿರುವ ಹೊಸ ಸಿನೆಮಾದ ಶೂಟಿಂಗ್ ಸದ್ದಿಲ್ಲದೆ ಮುಕ್ತಾಯಗೊಂಡಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ಶುರುವಾಗಿದ್ದ ಈ ಸಿನೆಮಾದ ಚಿತ್ರೀಕರಣವನ್ನು ಮೂರು ಹಂತಗಳಲ್ಲಿ ನಡೆಸಲಾಗಿದ್ದು, ಇದೀಗ ಚಿತ್ರೀಕರಣದ ಕೊನೆಯ ದಿನ ಸ್ಪೆಷಲ್ ವಿಡಿಯೋ‌ ಮೂಲಕ ಚಿತ್ರತಂಡ ಚಿತ್ರೀಕರಣ ಮುಗಿಸಿರುವ ಬಗ್ಗೆ ಮಾಹಿತಿ ನೀಡಿದೆ.

ಸದ್ಯದ ಮಟ್ಟಿಗೆ ಇನ್ನೂ ಹೆಸರಿಡದ ಪಕ್ಕಾ ಮಾಸ್ ಆಕ್ಷನ್ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಈ  ಸಿನೆಮಾದಲ್ಲಿ ದೊಡ್ಡ ತಾರಾಬಳಗವಿದೆ. ನಾಯಕ ನಟ ವಿಜಯ್‌ ಸೇತುಪತಿ ಅವರಿಗೆ ಸಂಯುಕ್ತ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಕುಮಾರ್, ಟಬು ಇತರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬ್ರಹ್ಮನಂದ್ ಹಾಗೂ ವಿಟಿವಿ ಗಣೇಶ್ ಕೂಡ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕ ಪುರಿ ಜಗನ್ನಾಥ್ ಅವರ ‘ಪುರಿ ಕನೆಕ್ಟ್ಸ’ ಬ್ಯಾನರ್ ಅಡಿಯಲ್ಲಿ ಈ ಸಿನೆಮಾ ನಿರ್ಮಾಣವಾಗುತ್ತಿದೆ. ಜೆ. ಬಿ ನಾರಾಯಣ್ ರಾವ್ ಕೊಂಡ್ರೊಲ್ಲಾ ಅವರ ‘ಜೆ. ಬಿ ಮೋಷನ್ ಪಿಕ್ಚರ್ಸ್‌’ ಬ್ಯಾನರ್‌ ಸಹಯೋಗದಲ್ಲಿ ಚಾರ್ಮಿ ಕೌರ್‌ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಅನಿಮಲ್’ ಚಿತ್ರಗಳಿಗೆ ಸಂಗೀತ ಒದಗಿಸಿರುವ ಹರ್ಷವರ್ದನ್ ರಾಮೇಶ್ವರ್ ಈ ಚಿತ್ರಕ್ಕೂ ಮ್ಯೂಸಿಕ್ ನೀಡಿದ್ದಾರೆ.

ಶೀಘ್ರದಲ್ಲೇ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ

ಸದ್ಯಕ್ಕೆ ಈ ಸಿನೆಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅದನ್ನು ತಿಳಿಯಲು ಕೂಡ ಅಭಿಮಾನಿಗಳಿಗೆ ಕುತೂಹಲ ಇದೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪ್ರಚಾರ ಕಾರ್ಯ ನಡೆಸಲು ಯೋಜನೆ ಹಾಕಿಕೊಂಡಿದೆ. ಶೀಘ್ರದಲ್ಲೇ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಿದೆ. ಈ ಪ್ಯಾನ್-ಇಂಡಿಯಾ ಸಿನೆಮಾ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Related Posts

error: Content is protected !!